ಗ್ರಾಪಂಗಳ ಅಭ್ಯುದಯಕ್ಕೆ ಶ್ರಮಿಸಲಾಗುತ್ತಿದೆ -ಪ್ರತಾಪ್ ಸಿಂಹ

ಮೈಸೂರು: ಗ್ರಾಮ ಪಂಚಾಯಿತಿಗಳು ನಡೆಯತ್ತಿರುವುದು ಮೋದಿ ಸರ್ಕಾರದಿಂದ ಹಾಗಾಗಿ ಇವುಗಳ ಅಭ್ಯುದಯಕ್ಕೆ ಶ್ರಮಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಬೀದಿ ದೀಪ ಹಾಳಾದರೆ ಬಲ್ಬ್ ಹಾಕುವುದು ನರೇಂದ್ರ ಮೋದಿ ಸರ್ಕಾರ, ಜಲ ಜೀವನ್ ಮಿಷನ್ ಮೂಲಕ ಮನೆಗಳಿಗೆ ನೀರು ಕೊಡುತ್ತಿರುವುದು ಮೋದಿ ಸರ್ಕಾರ ಎಂದು ಗ್ರಾಮ ಪಂಚಾಯಿತಿಗಳ ಅಭ್ಯುದಯಕ್ಕೆ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದರು.

ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎನ್.ಮಹೇಶ್, ಮಾಜಿ ಸಚಿವ ಸಿ.ಎಚ್.ವಿಜಯಶಂಕರ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರಾಧ್ಯಕ್ಷ ಶ್ರೀವತ್ಸ, ಮೇಯರ್ ಸುನಂದಾ ಫಾಲನೇತ್ರ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.