ಚರ್ಚ್ ನವರು ಒತ್ತುವರಿ ಮಾಡಿದ್ದ ಜಾಗ ತೆರವು

ಮೈಸೂರು: ಮೈಸೂರಿನ ಬೆಂಗಳೂರು- ಮೈಸೂರು ರಸ್ತೆಯಲ್ಲಿರುವ ಎಫ್ ಟಿ ಎಸ್ ವೃತ್ತದ ಬಳಿ ಪಿ ಎಸ್ ಐ ಕರುಣಾಪುರ ಚರ್ಚ್ ನವರು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಮಂಗಳವಾರ ಬೆಳ್ಳಂಬೆಳಗ್ಗೆ ತೆರವುಗೊಳಿಸಲಾಯಿತು.

ಮುಂಜಾನೆ 5 ಗಂಟೆಯಿಂದಲೇ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಬಿಗಿ ಪೆÇಲೀಸ್ ಬಂದೋಬಸ್ತ್ ನಲ್ಲಿ ತೆರವು ಕಾರ್ಯ ನಡೆಯಿತು.

ಮೈಸೂರು ಮಹಾನಗರ ಪಾಲಿಕೆಯ ವಲಯ ವಲಯ ಕಚೇರಿ 7 ಸಹಾಯಕ ಆಯುಕ್ತರ ನೇತೃತ್ವದಲ್ಲಿ ಕೋರ್ಟ್ ಆದೇಶದ ಮೇರೆಗೆ ಒತ್ತುವರಿ ಜಾಗವನ್ನು ತೆರವು ಗೊಳಿಸಲಾಗಿದೆ.

ಇಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.