ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ

ನವದೆಹಲಿ: ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ.

ಗರ್ಭಕಂಠ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೂನಂ ಕೇವಲ 32ನೇ ವಯಸ್ಸಿಗೆ ನಿಧನರಾಗಿದ್ದಾರೆ. ಅವರ ಹಠಾತ್‌ ನಿಧನ ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದೆ.

ಮಾಡೆಲ್ ಕಂ ನಟಿಯಾಗಿದ್ದ ಪೂನಂ ಪಾಂಡೆ ಸದಾ ಕಾಂಟ್ರವರ್ಸಿಗಳಿಂದಲೇ ಸದ್ದು ಮಾಡುತ್ತಿದ್ದರು.

ಪೂನಂ ಪಾಂಡೆ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್‌ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ ಎಂದು ಪೋಸ್ಟ್ ಮಾಡಲಾಗಿದೆ.

ಈ ಪೋಸ್ಟ್ ಬಂದ ನಂತರವೇ ಪೂನಂ ಪಾಂಡೆ ನಿಧನರಾಗಿರುವುದು ಎಲ್ಲರಿಗೂ ಗೊತ್ತಾಗಿದೆ.

ಪೂನಂ ಲವ್ ಈಸ್ ಪಾಯಿಸನ್ ಎಂಬ ಕನ್ನಡ ಸಿನಿಮಾದಲ್ಲಿ ಐಟಂ ಡ್ಯಾನ್ಸ್ ಮಾಡಿದ್ದರು.