ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿವೆ -ಸಿದ್ದರಾಮಯ್ಯ ಟೀಕೆ

ಮೈಸೂರು: ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮೈಸೂರಿನಲ್ಲಿ ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ,
ಇಂತಹ ಅವಕಾಶ ಸಿಂಧು ಪಕ್ಷಗಳನ್ನು ಜನತೆ ಸೋಲಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಕಾಂಗ್ರೆಸ್ ಸೇರಿದವರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ,ಬಿಜೆಪಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ನಮ್ಮ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ ಎಂದು ತಿಳಿಸಿದರು.

ರಾಜಕೀಯ, ಸಾಮಾಜಿಕ ಕೇತ್ರದಲ್ಲಿ ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ರಾಜೀವ್ ಅವರು ಕಾಂಗ್ರೆಸ್ಸಿನ ಸಿದ್ದಾಂತ ಹಾಗೂ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ಸಿದ್ದು‌ ಹೇಳಿದರು.

ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ ಎಂದ ಹೇಳಿದ ಸಿಎಂ,ಕಾಂಗ್ರೆಸ್ ಪಕ್ಷ ಗೆಲ್ಲಿಸಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ರಾಜೀವ್ ಮತ್ತು ಬೆಂಬಲಿಗರ ಸೇರ್ಪಡೆಯಿಂದಾಗಿ ಶಕ್ತಿ ಬಂದಂತಾಗಿದೆ,ಅವರ‌ ಸೇರ್ಪಡೆಯಿಂದ ಈ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಲಕ್ಷ್ಮಣ್ ಗೆಲ್ಲುವ ವಿಶ್ವಾಸ ಬಂದಂತಾಗಿದೆ ಎಂದು ಹೇಳಿದರು.

ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ಸಬ್ ಕಾ ಸಾಥ್ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ ಸಿದ್ದರಾಮಯ್ಯ,ಇದೇ ವೇಳೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಡಿಎಸ್ ಅಂದರೆ ಜಾತ್ಯಾತೀತ ಜನತಾದಳ ಇಂದು ಜಾತ್ಯಾತೀತವಾಗಿ ಉಳಿದಿದೆಯೇ ಎಂದು ಪ್ರಶ್ನಿಸಿದ ಸಿಎಂ, ನರೇಂದ್ರ ಮೋದಿ ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗುತ್ತೇನೆ, ನಾನು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರದು ಅನುಕೂಲಸಿಂಧು ರಾಜಕಾರಣ ಎಲ್ಲಿಯವರೆಗೆ ನಡೆಯುತ್ತದೆ ಎಂದು ಪ್ರಶ್ನಿಸಿದರು.

ರಾಜೀವ್, ಮಲ್ಲೇಶ್, ಬೈರಪ್ಪ, ಓಂಪ್ರಕಾಶ್ ಸೇರಿದಂತೆ ನೂರಾರು ಮಂದಿ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷ ಸೇರ್ಪಡೆ ಕಾರ್ಯಕ್ರದಲ್ಲಿ ಸಚಿವ ವೆಂಕಟೇಶ್, ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಮೈಸೂರು ಗ್ರಾಮೀಣ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.