ಬಿಜೆಪಿ 5ನೇ ಪಟ್ಟಿ: ಕಾಗೇರಿ, ಶೆಟ್ಟರ್‌ ಹಾಗೂ ಸುಧಾಕರ್‌ ಗೆ ಟಿಕೆಟ್‌

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದೆ.

5ನೇ ಪಟ್ಟಿಯಲ್ಲಿ ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿ, ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌, ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ್‌ ಹಾಗೂ ಚಿತ್ರದುರ್ಗದಿಂದ ಡಾ. ಕೆ. ಸುಧಾಕರ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಬಿಜೆಪಿ ಫೈರ್‌ ಬ್ರ್ಯಾಂಡ್‌ ಅನಂತ್‌ಕುಮಾರ್‌ ಹೆಗಡೆಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್‌ ನೀಡಲಾಗಿಲ್ಲ.

ಚಿತ್ರದುರ್ಗ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿಲ್ಲ.