ಸಚಿವ ಈಶ್ವರಪ್ಪ ಅವರಿಗೆ ಕೊರೊನಾ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಈಶ್ವರಪ್ಪನವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿ, ಹಿರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ವಿಷಯ ತಿಳಿದು ಬೇಸರವಾಗಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.