ಮಹಾಕಾಳೇಶ್ವರ ದೇಗುಲದಲ್ಲಿ ಅಗ್ನಿ ಅವಘಡ :14 ಅರ್ಚಕರಿಗೆ ಗಾಯ

ಚಂಡೀಗಢ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿ,14 ಅರ್ಚಕರು ಗಾಯಗೊಂಡಿದ್ದಾರೆ.

ಹೋಳಿ ಹಬ್ಬದ ಪ್ರಯುಕ್ತ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಕಾಣಿಸಿಕೊಂಡಿದೆ.

ಹೋಳಿ ಆಚರಿಸಲು ಗುಲಾಲ್ ಎಸೆಯುತ್ತಿದ್ದಾಗ ಕೆಲ ಗುಲಾಲ್‌ ಕರ್ಪೂರ ಇದ್ದ ತಾಲಿಯ ಮೇಲೆ ಬಿದ್ದು ಅದು ಕೆಳಗೆ ಬಿದ್ದ ಪರಿಣಾಮ ಬೆಂಕಿ ಆವರಿಸಿತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹದಿನಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು,ಕೆಲವರು ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟು ಮಂದಿ ಇಂದೋರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಮೃಣಾಲ್ ಮೀನಾ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅನುಕೂಲ್ ಜೈನ್ ಭೇಟಿ ನೀಡಿದ್ದರು.

ನಾನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದೇನೆ. ಇಂಥ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಬಾಬಾ ಮಹಾಕಾಳನಲ್ಲಿ ಪ್ರಾರ್ಥಿಸಿದ್ದಾರೆ.