ಪ್ರಜ್ವಲ್ ರೇವಣ್ಣ ಪ್ರಕರಣ;ಸರ್ಕಾರದ ಪರ ವಾದ ಮಂಡನೆಗೆ ಬಿ.ಎನ್. ಜಗದೀಶ್ ನೇಮಕ

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಸರ್ಕಾರದ ಪರವಾಗಿ ಬಿ.ಎನ್. ಜಗದೀಶ್ ವಾದ ಮಂಡಿಸಲಿದ್ದಾರೆ.

ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಮತ್ತು ಅವರ ತಂದೆ ಎಚ್‌. ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ಏಪ್ರಿಲ್‌ 28ರಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಲು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರಾಗಿರುವ ಬಿ. ಎನ್‌. ಜಗದೀಶ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಮುಂದಿನ ಆದೇಶದವರೆಗೂ ನೇಮಕ ಮಾಡಲಾಗಿದೆ

ದಂಡ ಪ್ರಕ್ರಿಯಾ ಸಂಹಿತೆ 1975ರ ಸೆಕ್ಷನ್‌ 24ರ ಉಪ ಸೆಕ್ಷನ್‌ 8ರ ಅಡಿಯಲ್ಲಿ ಜಗದೀಶ್‌ ಅವರನ್ನು ನೇಮಕ ಮಾಡಲಾಗಿದೆ.

ಪ್ರಜ್ವಲ್‌‌ ಪ್ರಕರಣದ ತನಿಖೆಯನ್ನು ಹಿರಿಯ ಐಪಿಎಸ್‌ ಅಧಿಕಾರಿ ಬಿ ಕೆ ಸಿಂಗ್‌ ನೇತೃತ್ವದ ವಿಶೇಷ ತನಿಖಾ ತಂಡ ಆರಂಭಿಸಿದೆ.