ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಒಬ್ಬ‌ ಉಗ್ರ ಹತ

ಜಮ್ಮು- ಕಾಶ್ಮೀರ: ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಕಾಳಗದಲ್ಲಿ ಒಬ್ಬ ಭಯೋತ್ಪಾಕ ಹತನಾಗಿದ್ದಾನೆ.

ಪುಲ್ವಾಮಾ ಜಿಲ್ಲೆಯ ಅರ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದ್ದು,ತಕ್ಷಣ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದವು, ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಈ ವೇಳೆ ಒಬ್ಬ ಉಗ್ರ ಮೃತಪಟ್ಟಿರುವುದಾಗಿ ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಬಿದ್ದಿದ್ದಾನೆ ಎಂದು ಶಂಕಿಸಲಾಗಿದ್ದು, ಗುಂಡಿನ ಚಕಮಕಿ ಮುಂದುವರಿದಿದೆ ಎಂದು ಹೇಳಿದ್ದಾರೆ.