ರಾಜ್ಯಾದ್ಯಂತ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ನವದೆಹಲಿ: ರಾಜ್ಯಾದ್ಯಂತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆ. 30ರಿಂದ ಸೆ. 1ರ ವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಇದರಿಂದಾಗಿ ದಕ್ಷಿಣ ಒಳನಾಡಿನಲ್ಲಿ ಕೂಡ ಸೆ. 1 ರಿಂದ 3 ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಿದೆ ಎಂದು
ಅವರು ತಿಳಿಸಿದ್ದಾರೆ.
ಸೆ. 1 ಮತ್ತು 2ರಂದು ವ್ಯಾಪಕ ಮಳೆ ನಿರೀಕ್ಷೆಯಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ. 2 ಮತ್ತು 3ರಂದು ಭಾರಿ ಮಳೆ ನಿರೀಕ್ಷಿಸÀಲಾಗಿದೆ.
ಎಲ್ಲಾ ಭಾಗದಲ್ಲಿ ಸೆ. 2 ಮತ್ತು 3ರಂದು ಉತ್ತಮ ಮಳೆ ನಿರೀಕ್ಷೆ ಮಾಡಲಾಗಿದೆ. ಹಾಗೆಯೇ ದಕ್ಷಿಣ ಒಳನಾಡಿನಲ್ಲಿ ಆ 30 ಮತ್ತು 31 ಮಳೆಯಾಗುವ ನಿರೀಕ್ಷೆ ಇದೆ ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.